Home ಟಾಪ್ ಸುದ್ದಿಗಳು ನಾನೇ ಸಿಎಂ ಎಂದು ಹೇಳುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು: ಈಶ್ವರಪ್ಪ

ನಾನೇ ಸಿಎಂ ಎಂದು ಹೇಳುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು: ಈಶ್ವರಪ್ಪ

ಬೆಂಗಳೂರು: ನಾನೇ ಸಿಎಂ ಎಂದು ಹೇಳುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಹೇಳಿದರು.

ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ ಶಿವಕುಮಾರ್​ ಅವರ ಮಾತಿನ ಅರ್ಥ. ನಾನೇ ಸಿಎಂ ಎನ್ನುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು. ಕರ್ನಾಟಕದ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೆ ಅಂತಾ ಹೇಳಿದ್ದೆ. ಅಜಿತ್ ಪವಾರ್​​ಗಳು ಬಹಳ ಜನ ಹುಟ್ಟಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಹೇಳಿದರು.

Join Whatsapp
Exit mobile version