ಪಾಕಿಸ್ತಾನದ ಪರ ಬೇಹುಗಾರಿಕೆ: ಬ್ರಹ್ಮೋಸ್‌ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್‌‌ಗೆ ಜೀವಾವಧಿ ಶಿಕ್ಷೆ

Prasthutha|

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಬಂಧಿತ, ಬ್ರಹ್ಮೋಸ್‌ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್‌ ವಿರುದ್ಧದ ಆರೋಪ ಕೋರ್ಟ್‌ನಲ್ಲಿ ಸಾಬೀತಾಗಿದೆ. ದೇಶದ್ರೋಹದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ನಾಗಪುರದ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

2018ರಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್‌ನನ್ನು ಪಾಕಿಸ್ತಾನದ ಪರ ಬೇಗುಗಾರಿಕೆ ನಡೆಸಿದ ಆರೋಪದಡಿ ಬಂಧಿಸಲಾಗಿತ್ತು. ಬ್ರಹ್ಮೋಸ್ ಕ್ಷಿಪಣಿ ಬಗ್ಗೆ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ನೀಡಿದ ಆರೋಪದ ಮೇಲೆ ಬಂಧನವಾಗಿತ್ತು.

ಬ್ರಹ್ಮೋಸ್ ಏರೋಸ್ಪೇಸ್‌ ಭಾರತದ ಡಿಆರ್‌ಡಿಒ ಹಾಗೂ ರಷ್ಯಾದ ಎನ್‌ಪಿಒ ಮಶಿನೊಸ್ಟ್ರೊಯೆನಿಯ( NPO Mashinostroyenia) ಜಂಟಿ ಸಹಯೋಗದಲ್ಲಿ ಭಾರತದ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಸ್ಥಾಪಿತವಾದ ಸಂಸ್ಥೆಯಾಗಿತ್ತು. ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ನೆಲ, ವಾಯು, ಸಮುದ್ರ ಮತ್ತು ಜಲಂತರ್ಗಾಮಿಯಾಗಿಯೂ ಪ್ರಯೋಗಿಸಬಹುದಾಗಿದೆ.

- Advertisement -

ನಿಶಾಂತ್ ಅಗರ್ವಾಲ್ ಬ್ರಹ್ಮೋಸ್ ಏರೋಸ್ಪೇಸ್‌ನಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿ ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದ ನಿಶಾಂತ್, ಕೈತುಂಬ ಸಂಬಳ ಬರುತ್ತಿದ್ದರೂ ಮಹತ್ವದ ಮಾಹಿತಿಯನ್ನು ನೆರೆಯ ಶತ್ರು ದೇಶಕ್ಕೆ ನೀಡಿ ದೇಶದ್ರೋಹ ಕೃತ್ಯ ಎಸಗಿದ್ದಾರೆ.

ಅಧಿಕೃತ ರಹಸ್ಯ ಕಾಯಿದೆಯಡಿ ನಾಗಪುರ ಜಿಲ್ಲಾ ನ್ಯಾಯಾಲಯವು ಅಗರ್ವಾಲ್‌ಗೆ ಜೀವಾವಧಿ ಶಿಕ್ಷೆ ಮತ್ತು 14 ವರ್ಷಗಳ ಕಾಲ ಆರ್‌ಐ ಮತ್ತು 3,000 ರೂ. ದಂಡ ವಿಧಿಸಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜ್ಯೋತಿ ವಜಾನಿ ಮಾಹಿತಿ ನೀಡಿದ್ದಾರೆ. ಆದರೆ ಕಳೆದ ಏಪ್ರಿಲ್‌ನಲ್ಲಿ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಅಗರ್ವಾಲ್‌ಗೆ ಜಾಮೀನು ನೀಡಿತ್ತು ಎಂಬುದು ಗಮನಿಸಬೇಕಾದ ವಿಚಾರವಾಗಿದೆ.



Join Whatsapp