ಬಿಜೆಪಿ ನಾಯಕರು ಕಾನೂನು ಉಲ್ಲಂಘಿಸಿದರೂ ಕೇಸ್ ದಾಖಲಾಗುವುದಿಲ್ಲ: ಡಿಕೆಶಿ ಆಕ್ರೋಶ

Prasthutha|

ಬೆಂಗಳೂರು: ನಾವು ಮುಖ್ಯಮಂತ್ರಿ ಮನೆಗೆ ಘೇರಾವ್ ಹಾಕಲು ಹೋದಾಗ ನಮ್ಮನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ಹಲವು ಬಾರಿ ಬಿಜೆಪಿ ನಾಯಕರು ಕಾನೂನು ಉಲ್ಲಂಘಿಸಿದರೂ ಅವರ ಮೇಲೆ ಕೇಸ್ ಹಾಕದೆ, ನಮ್ಮ ಮೇಲೆ ಮಾತ್ರ ದಾಖಲಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ  ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ಮೆರವಣಿಗೆ ಮೂಲಕ ಸಿಎಂ ಮನೆಗೆ ಬಂದು ರಾಜೀನಾಮೆ ನೀಡಿದ ಸಂದರ್ಭದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ  ಕೂಗಾಟ, ಚೀರಾಟ ಮಾಡಿದ್ದು ಮಾಧ್ಯಮಗಳಲ್ಲಿ ವರದಿಯಾಗಿದ್ದರೂ, ಅವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಈಶ್ವರಪ್ಪನವರು ಶಿವಮೊಗ್ಗದಲ್ಲಿ ಸೆಕ್ಷನ್ 144 ಉಲ್ಲಂಘನೆ ಮಾಡಿ ಹರ್ಷ ಶವಯಾತ್ರೆ ಮಾಡಿದರೂ ಕೇಸ್ ಹಾಕಲಿಲ್ಲ ಎಂದು ಹೇಳಿದರು.

ಕಳೆದ ಒಂದು ವರ್ಷದಲ್ಲಿ ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಅನೇಕ ಬಾರಿ ಕಾನೂನು ಕೈಗೆತ್ತಿಕೊಂಡಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದರೆ ತಪ್ಪೇನು ಎಂದು ಮುಖ್ಯಮಂತ್ರಿಗಳೇ ಪ್ರೋತ್ಸಾಹ ನೀಡುತ್ತಿದ್ದಾರೆ.ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಸಮವಸ್ತ್ರ ತ್ಯಜಿಸಿ ಕೇಸರಿ ವಸ್ತ್ರ ಧರಿಸಿದರೂ ಸಿಎಂ, ಗ್ರಹಮಂತ್ರಿ ಸುಮ್ಮನಿದ್ದರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Join Whatsapp