ಹುಬ್ಬಳ್ಳಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವ ಮುಂಚೆಯೇ ಅವರು ಆರೋಪಮುಕ್ತರಾಗಿ ಬರಲಿದ್ದಾರೆ ಎಂದು ಸರ್ಕಾರ ಹೇಳಿತ್ತು. ಹಾಗಾಗಿ, ಈಗ ಕ್ಲೀನ್ ಚಿಟ್ ನೀಡಿರುವುದರಲ್ಲಿ ಯಾವುದೇ ಆಶ್ಚರ್ಯ ಇಲ್ಲ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಸಚಿವರಿಗೆ ಕ್ಲೀನ್ ಚಿಟ್ ಕೊಡಲಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮ ನಮಗೆ ಆದರ್ಶ ಎನ್ನುವ ಬಿಜೆಪಿಯನ್ನು ಸ್ವತಃ ರಾಮನೂ ಕ್ಷಮಿಸಲ್ಲ. ಸರ್ಕಾರದ ನೀತಿಗಳು ಸರಿಯಿಲ್ಲ ಎಂದು ಟೀಕಿಸಿದರು.