Home ಟಾಪ್ ಸುದ್ದಿಗಳು ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಟುಕೊಂಡು ಓಡಾಡುತ್ತಿದ್ದಾರೆ: ಅನಂತ್ ಕುಮಾರ್ ಹೆಗಡೆ

ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಟುಕೊಂಡು ಓಡಾಡುತ್ತಿದ್ದಾರೆ: ಅನಂತ್ ಕುಮಾರ್ ಹೆಗಡೆ

ಕಾರವಾರ: ಬಿಜೆಪಿಯಷ್ಟು ಕಾಂಗ್ರೆಸ್ ನಲ್ಲಿಲ್ಲ, ಅವರಲ್ಲಿ ಸ್ವಲ್ಪ ಕನ್ಫ್ಯೂಸ್ ಇದೆ. ಆದರೆ ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಟುಕೊಂಡು ಓಡಾಡುತ್ತಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.


ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಳ್ಳಿ ಗ್ರಾಮದಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ, ಬಿಜೆಪಿಯಷ್ಟು ಕಾಂಗ್ರೆಸ್ ನಲ್ಲಿಲ್ಲ, ಅವರಲ್ಲಿ ಸ್ವಲ್ಪ ಕನ್ಫ್ಯೂಸ್ ಇದೆ. ಆದರೆ ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಕೊಂಡು ಓಡ್ತಿದ್ದಾರೆ, ಎಲ್ಲರೂ ನನಗೆ ಟಿಕೆಟ್ ಸಿಕ್ಕಿದೆ, ನನಗೆ ಟಿಕೆಟ್ ಸಿಕ್ಕಿದೆ ಅಂತಿದ್ದಾರೆ. ನನ್ನ ಬಳಿ ಟಿಕೆಟ್ ಇಲ್ಲ, ನಮ್ಮ ಹೈಕಮಾಂಡ್ ಟಿಕೆಟ್ ಕೊಡುತ್ತದೆ. ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ನನಗೂ ಕೂಡ ಗೊತ್ತಿಲ್ಲ ಎಂದು ಹೇಳಿದರು.

Join Whatsapp
Exit mobile version