ಪ್ರತಿಯೊಬ್ಬರ ಜೀವನವೂ ಮುಖ್ಯ: ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಾಯಿ ಪಲ್ಲವಿ

Prasthutha|

ದಕ್ಷಿಣ ಭಾರತದ ಖ್ಯಾತ ಸಿನಿಮಾ ನಟಿ ಸಾಯಿ ಪಲ್ಲವಿ ನೀಡಿದ ಒಂದು ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು . ಧರ್ಮ ಮತ್ತು ದೇವರ ಹೆಸರಿನಲ್ಲಿ ಜನರ ಮೇಲೆ ಹಲ್ಲೆ ಮಾಡುವುದು ತಪ್ಪು ಎಂದ್ದಿದ್ದ ಸಾಯಿ ಪಲ್ಲವಿಯವರ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು. ಕೆಲವರು ಸಾಯಿ ಪಲ್ಲವಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಸಾಯಿ ಪಲ್ಲವಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

- Advertisement -

ನಾನು ಇದೇ ಮೊದಲ ಬಾರಿಗೆ ಸ್ಪಷ್ಟನೆ ನೀಡಲು ನಿಮ್ಮ ಎದುರು ಬರುತ್ತಿದ್ದೇನೆ. ಹೃದಯದಿಂದ ಮಾತನಾಡುವಾಗ ನಾನು ಎರಡು ಬಾರಿ ಯೋಚಿಸುತ್ತೇನೆ. ಇತ್ತೀಚಿನ ಸಂದರ್ಶನವೊಂದರಲ್ಲಿ ನಾನು ಎಡವೋ ಅಥವಾ ಬಲವೋ ಎಂದು ಪ್ರಶ್ನೆ ಮಾಡಲಾಯಿತು. ಆಗ ನಾನು ತಟಸ್ಥ ಎನ್ನುವ ಉತ್ತರ ಕೊಟ್ಟೆ. ನಾವು ಮೊದಲು ಮನುಷ್ಯರಾಗಬೇಕು ಎಂದು ಹೇಳಿದ್ದೆ. ನಾನು ವಿಚಾರಗಳನ್ನು ಹೇಗೆ ನೋಡುತ್ತೇನೆ ಎನ್ನುವುದನ್ನು ಹೇಳಿದ್ದೆ’ ಎಂದು ಮಾತು ಆರಂಭಿಸಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಿದ ನಂತರ ನಾನು ಡಿಸ್ಟರ್ಬ್ ಆಗಿದ್ದೆ. ಅಲ್ಲಿ ನಡೆದ ಹತ್ಯೆ ಬಗ್ಗೆ ಮರುಗಿದ್ದೆ. ನಿರ್ದೇಶಕರ (ವಿವೇಕ್ ಅಗ್ನಿಹೋತ್ರಿ) ಜತೆ ಈ ಬಗ್ಗೆ ಮಾತನಾಡಿದ್ದೆ. ಅದೇ ರೀತಿ ಕೊವಿಡ್ ಸಂದರ್ಭದಲ್ಲಿ ಆದ ಗುಂಪು ಹಲ್ಲೆ ವಿಡಿಯೋ ನೋಡಿ ನಾನು ವಿಚಲಿತಗೊಂಡಿದ್ದೆ . ಯಾವುದೇ ಧರ್ಮದ ಹೆಸರಲ್ಲಿ ಹಿಂಸೆ ಮಾಡುವುದು ಪಾಪ. ಗುಂಪು ಹಲ್ಲೆಯನ್ನು ಕೆಲವರು ಸಮರ್ಥಿಸಿಕೊಂಡಿದ್ದರು. ನಿಜಕ್ಕೂ ಅದು ಬೇಸರದ ವಿಚಾರ. ಬೇರೆಯವರ ಜೀವವನ್ನು ತೆಗೆದುಕೊಳ್ಳುವ ಹಕ್ಕು ನಮಗೆ ಇಲ್ಲ. ನಾನು ಎಂಬಿಬಿಎಸ್ ಪದವೀಧರೆಯಾಗಿ ಎಲ್ಲರ ಜೀವವೂ ಮುಖ್ಯ ಎಂದು ನಂಬಿದ್ದೇನೆ’ ಎಂದು ಹೇಳಿದ್ದಾರೆ.

Join Whatsapp