Home ಟಾಪ್ ಸುದ್ದಿಗಳು ಇವಿಎಂ ವಿವಿಪ್ಯಾಟ್ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಇವಿಎಂ ವಿವಿಪ್ಯಾಟ್ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

‘ನಾವು ಚುನಾವಣೆ ನಿಯಂತ್ರಿಸಲು ಆಗಲ್ಲ’


ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಇವಿಎಂ ಮತ್ತು ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಕ್ತಾಯಗೊಳಿಸಿದೆ. ಈ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಕೇವಲ ಶಂಕೆಯ ಆಧಾರದಲ್ಲಿ ಸುಪ್ರೀಂ ಕೋರ್ಟ್ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತ ಅವರ ಪೀಠ ಹೇಳಿದೆ.


ಇದಕ್ಕೂ ಮೊದಲು ಹಲವು ಗೊಂದಲಗಳಿಗೆ ಸ್ಪಷ್ಟೀಕರಣ ಕೇಳಲು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಹಾಜರಿರಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು.

Join Whatsapp
Exit mobile version