ಇವಿಎಂ–ವಿವಿ–ಪ್ಯಾಟ್ ಮತಗಳ ಹೋಲಿಕೆ: ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಮತ ಎಣಿಕೆ ವೇಳೆ ಇವಿಎಂಗಳಲ್ಲಿನ ಮತಗಳು ಮತ್ತು ವಿವಿ– ಪ್ಯಾಟ್ ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತಿರಸ್ಕರಿಸಿದೆ. ನ್ಯಾಯಾಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತ ಅವರನ್ನು ಒಳಗೊಂಡ ನ್ಯಾಯಪೀಠವು ತೀರ್ಪು ನೀಡಿದೆ.

- Advertisement -


ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ.

Join Whatsapp