ನವದೆಹಲಿ: ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 2020ರಿಂದ ಕರಾಳ UAPA ಕಾಯ್ದೆ ಅಡಿಯಲ್ಲಿ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ಎಎಪಿ ಮಾಜಿ ಮುಖಂಡ ತಾಹಿರ್ ಹುಸೇನ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸದ್ಯ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪವಿದೆ ಎಂದು ದೆಹಲಿ ನ್ಯಾಯಾಲಯ ತಿಳಿಸಿದೆ.
ತಾಹಿರ್ ಹುಸೇನ್ ಅವರು ಅಕ್ರಮ ವರ್ಗಾವಣೆಗೆ ಸಂಚು ರೂಪಿಸಿದ್ದರು ಮತ್ತು ಈ ಹಣವನ್ನು ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಬಳಸಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದಿರುವುದಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಬ್ ರಾವತ್ ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಆರೋಪಗಳನ್ನು ರೂಪಿಸಲು ಮತ್ತು ವಿಚಾರಣೆಯನ್ನು ಮುಂದುವರಿಸಲು ಸಾಕಷ್ಟು ದಾಖಲೆಗಳಿವೆ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ರಾವತ್ ತಿಳಿಸಿದ್ದಾರೆ.