ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಿರಣ್ ಕುಮಾರ್ ರೆಡ್ಡಿ ಅವರು ಅವಿಭಜಿತ ಆಂಧ್ರಪ್ರದೇಶದ ಕೊನೆಯ ಸಿಎಂ ಕೂಡ ಆಗಿದ್ದರು.
ಮಾರ್ಚ್ 11 ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದ ರೆಡ್ಡಿ, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್’ನ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ, ದಯವಿಟ್ಟು ಈ ಪತ್ರವನ್ನು ಸ್ವೀಕರಿಸಿ” ಎಂದು ಮನವಿ ಮಾಡಿದ್ದರು. ಮೂಲಗಳ ಪ್ರಕಾರ ಕಿರಣ್ ಕುಮಾರ್ ರೆಡ್ಡಿ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.