Home ಅಪರಾಧ ಇನ್ಸ್‌’ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ: ಮಾಜಿ ಬಿಜೆಪಿ ಕಾರ್ಪೊರೇಟರ್ ಸೆರೆ

ಇನ್ಸ್‌’ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ: ಮಾಜಿ ಬಿಜೆಪಿ ಕಾರ್ಪೊರೇಟರ್ ಸೆರೆ

ಬೆಂಗಳೂರು: ಕರ್ತವ್ಯ ನಿರತ ಸರ್ಕಲ್ ಇನ್ಸ್’ಪೆಕ್ಟರ್ (ಸಿಪಿಐ) ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್​ ವಿ.ಬಾಲಕೃಷ್ಣ ಅವರನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್ ಬಾಲಕೃಷ್ಣ ಅವರು ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು ನಿನ್ನೆ ಸಂಜೆ ಕಗ್ಗಲೀಪುರ ಠಾಣೆಗೆ ಬಂದಿದ್ದರು. ಜಮೀನು ವ್ಯಾಜ್ಯದ ವಿಚಾರ ಮಾತನಾಡುವ ವೇಳೆ ಜಗಳ ‌ನಡೆದು ಸರ್ಕಲ್ ಇನ್ಸ್‌’ಪೆಕ್ಟರ್ ವಿಜಯ್ ಕುಮಾರ್ ಅವರ ಕತ್ತಿನ ಪಟ್ಟಿ ಹಿಡಿದು ಬಾಲಕೃಷ್ಣ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ತಕ್ಷಣವೇ ಬಾಲಕೃಷ್ಣರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಸರ್ಕಲ್ ಇನ್ಸ್‌’ಪೆಕ್ಟರ್ ವಿಜಯ್ ಕುಮಾರ್ ನೀಡಿದ ದೂರು ಆಧರಿಸಿ ಕಗ್ಗಲೀಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 353 ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಐಪಿಸಿ ಸೆಕ್ಷನ್ 332 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯಕೀಯ ತಪಾಸಣೆ ನಡೆಸಿ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದು, ಇಂದು ಆರೋಪಿ ಬಾಲಕೃಷ್ಣರನ್ನು ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ. ಇನ್ನು ಹೆಚ್ಚಿನ ವಿಚಾರಣೆಗಾಗಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

Join Whatsapp
Exit mobile version