Home ಟಾಪ್ ಸುದ್ದಿಗಳು ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳ ತಂಡವೊಂದು ಗುರುವಾರ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಛಲವಾದಿಪಾಳ್ಯದ ಕಾರ್ಪೊರೇಟರ್ ಆಗಿದ್ದ ರೇಖಾ ಅವರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.


ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್ ನ ಕಚೇರಿ ಒಳಗೆ ಇಂದು ಬೆಳಿಗ್ಗೆ 10.15ರ ವೇಳೆ ಹೋಗುತ್ತಿದ್ದ ರೇಖಾ ಕದಿರೇಶ್ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.


ಬೆಂಗಳೂರಿನ ಫ್ಲವರ್ ಗಾರ್ಡನ್ ಸಮೀಪ ಈ ಘಟನೆ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. ಘಟನೆಯಿಂದ ಬೆಂಗಳೂರಿಗರು ಬೆಚ್ಚಿ ಬಿದ್ದಿದ್ದಾರೆ.


ಹಳೆ ವೈಷಮ್ಯದಿಂದ ರೇಖಾ ಅವರ ಹತ್ಯೆ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದ್ದು ಮೂರು ವರ್ಷಗಳ ಹಿಂದೆ 2018ರ ಫೆಬ್ರವರಿ 6ರಂದು ರೇಖಾ ಅವರ ಪತಿ ಕದಿರೇಶ್ ಅವರನ್ನು ಸಹ ಇದೇ ರೀತಿ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದರು.
ಸ್ಥಳಕ್ಕೆ ಡಿಸಿಪಿ ಸಂಜೀವ್ ಪಾಟೀಲ್, ಚಿಕ್ಕಪೇಟೆ ಎಸಿಪಿ ಹಾಗೂ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version