ಬಿಜೆಪಿ ಮಾಜಿ ಸಂಸದ ಕಾಂಗ್ರೆಸ್ ಸೇರ್ಪಡೆ

Prasthutha|

ಗಾಂಧೀನಗರ: ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಿಧ ಪಕ್ಷಗಳ ರಾಜಕೀಯ ನಾಯಕರು ಪಕ್ಷಾಂತರ ಮಾಡುತ್ತಿದ್ದಾರೆ. ಬಿಜೆಪಿಯ ಮಾಜಿ ಸಂಸದ ಪ್ರಭಾತ್‌ ಸಿಂಹ ಚೌಹಾಣ್ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ. ಖೇಡಾ ಜಿಲ್ಲೆಯಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಯ ವೇಳೆ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

- Advertisement -


ಕಾಂಗ್ರೆಸ್ ನಾಯಕರಾದ ಸಚಿನ್ ಪೈಲಟ್, ಅಮಿತ್ ಚಾವ್ಡಾ, ನರನ್ ರಥ್ವಾ, ಜಗದೀಶ್ ಠಾಕೂರ್, ಸುಖರಾಮ್ ರಥ್ವಾ ಮತ್ತು ಸಿದ್ಧಾರ್ಥ್ ಪಟೇಲ್ ಅವರ ಸಮ್ಮುಖದಲ್ಲಿ ಚೌಹಾಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಚೌಹಾಣ್ ಅವರು ಮುಂಬರುವ ಚುನಾವಣೆಯಲ್ಲಿ ಕಲೋಲ್ ಅಥವಾ ಗೋದ್ರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಚೌಹಾಣ್ 2017 ರಿಂದ ಬಿಜೆಪಿಯೊಂದಿಗೆ ಅಸಮಾಧಾನ ಹೊಂದಿದ್ದರು. ಚೌಹಾಣ್ ಅವರು ತಮ್ಮ ಪತ್ನಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು. 2019ರ ಲೋಕಸಭೆ ಚುನಾವಣೆಯಲ್ಲಿ ಚೌಹಾಣ್ ಅವರನ್ನು ಪಕ್ಷ ಬದಿಗೊತ್ತಿತ್ತು. ಇದರಿಂದ ಅವರು ತುಂಬಾ ಅಸಮಾಧಾನ ಹೊಂದಿದ್ದರು.

- Advertisement -

ಕಾಂಗ್ರೆಸ್‌ ಪಕ್ಷದಲ್ಲಿದ್ದ ಅವರು 1995ರಲ್ಲಿ ಬಿಜೆಪಿ ಸೇರಿದ್ದರು. ಬಿಜೆಪಿ ಸೇರಿದ ಬಳಿಕ 1995, 1998 ಮತ್ತು 2002ರಲ್ಲಿ ಕಲೋಲ್ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಭರ್ಜರಿ ಗೆಲುವು ದಾಖಲಿಸಿದ್ದರು.

Join Whatsapp