ಭೂಕಬಳಿಕೆ ಪ್ರಕರಣದಲ್ಲಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಸೋದರಳಿಯ ಕನ್ನ ರಾವ್ ಅವರನ್ನು ಬಂಧಿಸಲಾಗಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ತೆಲಂಗಾಣದಲ್ಲಿ ರಾಜಕೀಯ ರಂಗೇರಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಆರ್ ಎಸ್ ಗೆ ಸಂಕಷ್ಟ ಎದುರಾಗಿದೆ.
ಒಂದೆಡೆ ಪಕ್ಷದ ಪ್ರಮುಖ ನಾಯಕರೆಲ್ಲ ಕಾಂಗ್ರೆಸ್ ಹಾದಿ ತುಳಿಯುತ್ತಿದ್ದರೆ, ಮತ್ತೊಂದೆಡೆ ಈಗಾಗಲೇ ದೆಹಲಿ ಮದ್ಯ ಹಗರಣದಲ್ಲಿ ಎಂಎಲ್ಸಿ ಕಲ್ವಕುಂಟ್ಲ ಕವಿತಾ ಅವರನ್ನು ಇಡಿ ಬಂಧಿಸಿದೆ.