ಗದಗ: ಹುಟ್ಟುಹಬ್ಬದ ಸಲುವಾಗಿ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ನಟ ಯಶ್ ಅಭಿಮಾನಿಗಳ ಕುಟುಂಬಕ್ಕೆ ಸಚಿವ ಹೆಚ್.ಕೆ ಪಾಟೀಲ್ ಪರಿಹಾರ ವಿತರಿಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂ. ಪರಿಹಾರ ವಿತರಿಸಿದ್ದಾರೆ.
ಮೃತಪಟ್ಟ ಮುರಳಿ, ನವೀನ್, ಹನುಮಂತ ಎಂಬವರ ಮನೆಗಳಿಗೆ ಸಚಿವ ಹೆಚ್.ಕೆ ಪಾಟೀಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಪರಿಹಾರ ಚೆಕ್ ವಿತರಣೆ ಮಾಡಿದರು.