ದೆಹಲಿ: ಗುಪ್ತಚರ ವಿಭಾಗದ ಮಾಜಿ ಅಧಿಕಾರಿಯಿಂದ ಅಪ್ರಾಪ್ತೆಯ ಅತ್ಯಾಚಾರ

Prasthutha|

ನವದೆಹಲಿ: ಕೆಲಸ ಕೊಡಿಸುವ ನೆಪದಲ್ಲಿ 60 ವರ್ಷ ಪ್ರಾಯದ ಮಾಜಿ ಗುಪ್ತಚರ ವಿಭಾಗ (ಐಬಿ) ದ ಅಧಿಕಾರಿಯೊಬ್ಬರು 17ರ ಹರೆಯದ ಅಪ್ರಾಪ್ತೆಯನ್ನು ದೆಹಲಿ ಸಮೀಪದ ಕರೋಲ್ ಬಾಗ್ ನಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಕರೋಲ್ ಬಾಗ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರನ್ವಯ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಮತ್ತು ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಬಳಿಕ ಆರೋಪಿ ತಲೆಮರಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



Join Whatsapp