Home ಟಾಪ್ ಸುದ್ದಿಗಳು ದೆಹಲಿ: ಗುಪ್ತಚರ ವಿಭಾಗದ ಮಾಜಿ ಅಧಿಕಾರಿಯಿಂದ ಅಪ್ರಾಪ್ತೆಯ ಅತ್ಯಾಚಾರ

ದೆಹಲಿ: ಗುಪ್ತಚರ ವಿಭಾಗದ ಮಾಜಿ ಅಧಿಕಾರಿಯಿಂದ ಅಪ್ರಾಪ್ತೆಯ ಅತ್ಯಾಚಾರ

ನವದೆಹಲಿ: ಕೆಲಸ ಕೊಡಿಸುವ ನೆಪದಲ್ಲಿ 60 ವರ್ಷ ಪ್ರಾಯದ ಮಾಜಿ ಗುಪ್ತಚರ ವಿಭಾಗ (ಐಬಿ) ದ ಅಧಿಕಾರಿಯೊಬ್ಬರು 17ರ ಹರೆಯದ ಅಪ್ರಾಪ್ತೆಯನ್ನು ದೆಹಲಿ ಸಮೀಪದ ಕರೋಲ್ ಬಾಗ್ ನಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಕರೋಲ್ ಬಾಗ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರನ್ವಯ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಮತ್ತು ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಬಳಿಕ ಆರೋಪಿ ತಲೆಮರಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Join Whatsapp
Exit mobile version