ಯುಪಿಯಲ್ಲಿ ಅಕ್ರಮ ಬಂಧನ, ನಿವಾಸಗಳ ನೆಲಸಮದ ವಿರುದ್ಧ ಸ್ವಯಂಪ್ರೇರಿತ ಕ್ರಮಕ್ಕೆ ಸುಪ್ರೀಂ ಕೋರ್ಟ್ ಗೆ ಪತ್ರ ಬರೆದ ಮಾಜಿ ನ್ಯಾಯಾಧೀಶರು ಮತ್ತು ವಕೀಲರು

Prasthutha|

ನವದೆಹಲಿ: ಪ್ರವಾದಿ ಮುಹಮ್ಮದ್ ಬಗ್ಗೆ ಬಿಜೆಪಿ ವಕ್ತಾರರು ನೀಡಿದ ಹೇಳಿಕೆಗಳ ವಿರುದ್ಧ ನಡೆದ ಪ್ರತಿಭಟನೆಗಳ ನಂತರ, ಉತ್ತರ ಪ್ರದೇಶ ರಾಜ್ಯದಲ್ಲಿ ಅಕ್ರಮ ಬಂಧನ, ನಿವಾಸಗಳ ನೆಲಸಮ ಮತ್ತು ಪ್ರತಿಭಟನಕಾರರು ಮತ್ತು ಪೊಲೀಸ್ ಕಸ್ಟಡಿಯಲ್ಲಿರುವವರ ಮೇಲೆ ಪೊಲೀಸ್ ಹಿಂಸಾಚಾರದ ಆರೋಪದ ವಿವಿಧ ಘಟನೆಗಳನ್ನು ಸ್ವಯಂಪ್ರೇರಿತವಾಗಿ ಪರಿಗಣಿಸುವಂತೆ ಕೋರಿ ಮಾಜಿ ನ್ಯಾಯಾಧೀಶರು ಮತ್ತು ವಿವಿಧ ವಕೀಲರು ಸುಪ್ರೀಂ ಕೋರ್ಟ್ ಗೆ ಪತ್ರ ಬರೆದಿದ್ದಾರೆ.

- Advertisement -

ಶಾಂತಿಯುತ ಪ್ರತಿಭಟನೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವನ್ನು ನೀಡುವ ಬದಲು, ಉತ್ತರ ಪ್ರದೇಶದ ರಾಜ್ಯ ಆಡಳಿತವು ಅಂತಹ ವ್ಯಕ್ತಿಗಳ ವಿರುದ್ಧ ಹಿಂಸಾತ್ಮಕ ಕ್ರಮ ತೆಗೆದುಕೊಳ್ಳಲು ಅನುಮತಿ ನೀಡಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.



Join Whatsapp