ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ನಿಧನ

Prasthutha|

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್​.ಟಿ. ತಿಮ್ಮಪ್ಪ ಹೆಗಡೆ ನಿಧನರಾಗಿದ್ದಾರೆ.

- Advertisement -

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು(ಜ.17) ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು ಎರಡು ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

- Advertisement -

1978 ಹಾಗೂ 1983ರಲ್ಲಿ ಸಾಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  1978 ರಲ್ಲಿ ಜನತಾ ಪಕ್ಷದಿಂದ ಸ್ಫರ್ಧಿಸಿದ್ದ ಕಾಗೋಡು ತಿಮ್ಮಪ್ಪ ವಿರುದ್ಧ ಕಾಂಗ್ರೆಸ್​ನಿಂದ ಸ್ಫರ್ಧಿಸಿದ ಅವರು ಗೆಲುವು ಸಾಧಿಸಿದ್ದರು.

ತಿಮ್ಮಪ್ಪ ಹೆಗಡೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಎಲ್.ಟಿ. ತಿಮ್ಮಪ್ಪ ಹೆಗಡೆ ಅವರು ಪತ್ನಿ ಸಾವಿತ್ರಮ್ಮ, ಪುತ್ರರಾದ ತಿಮ್ಮಪ್ಪ ಮತ್ತು ಅಶೋಕ, ಸಹೋದರ ಗಣಪತಿ ಹೆಗಡೆ ಹಾಗೂ ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Join Whatsapp