ಬೆಂಗಳೂರು ಗಲಭೆ | ಆಸ್ಪತ್ರೆಯಿಂದ ‘ಪರಾರಿ’ಯಾದ ಸಂಪತ್ ರಾಜ್ ಇನ್ನೂ ಸುಳಿವಿಲ್ಲ

Prasthutha: October 31, 2020

ಬೆಂಗಳೂರು : ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ಮಾಜಿ ಮೇಯರ್, ಕಾಂಗ್ರೆಸ್ ನಾಯಕ ಆರ್. ಸಂಪತ್ ರಾಜ್ ಆಸ್ಪತ್ರೆಯಿಂದ ‘ಪರಾರಿ’ಯಾಗಿ 23 ದಿನಗಳ ಬಳಿಕ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆಸ್ಪತ್ರೆಗೆ ಎರಡನೇ ಬಾರಿಗೆ ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ನೋಟಿಸ್ ಜಾರಿಗೊಳಿಸಿ, ಸಂಪತ್ ರಾಜ್ ನಾಪತ್ತೆಯಾದ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದ್ದಾರೆ.

ಅ.7ರಂದು ಆಸ್ಪತ್ರೆಯಿಂದ ‘ಪರಾರಿ’ಯಾಗಿದ್ದಾರೆನ್ನಲಾದ ಸಂಪತ್ ರಾಜ್ ಹುಡುಕಾಟ 23 ದಿನಗಳ ನಂತರ ಸಿಸಿಬಿ ಪೊಲೀಸರು ಆರಂಭಿಸಿದ್ದಾರೆ.

ಆದರೆ, ಸಂಪತ್ ರಾಜ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಹೋಗಿದ್ದಾರೆ. ಜಾಮೀನು ರಹಿತ ಬಂಧನಾದೇಶ ಇದ್ದರೂ, ಆಸ್ಪತ್ರೆ ಹೊರಗೆ ಯಾವುದೇ ಸಿಬ್ಬಂದಿಯನ್ನು ಪೊಲೀಸರು ನಿಯೋಜಿಸಿರಲಿಲ್ಲ. ಅವರ ನಿರ್ಲಕ್ಷ್ಯಕ್ಕೆ ಆಸ್ಪತ್ರೆ ಹೇಗೆ ಹೊಣೆಯಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡದರೆ, ಆರೋಪಿ ತಪ್ಪಿಸಿಕೊಳ್ಳಲು ನೆರವಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.  

ಮಾಜಿ ಮೇಯರ್, ಕಾಂಗ್ರೆಸ್ ನಾಯಕ ಸಂಪತ್ ರಾಜ್ ಗಲಭೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದು, ಪ್ರಕರಣದಿಂದ ತಪ್ಪಿಸಿಕೊಳ್ಳಲು ಇತ್ತೀಚೆಗೆ ಬಿಜೆಪಿ ಸೇರಲಿದ್ದಾರೆ ಎಂದು ಸುದ್ದಿಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಎಫ್ ಐಆರ್ ನಲ್ಲಿ ತಮ್ಮ ಹೆಸರು ದಾಖಲಾಗುತ್ತಿದ್ದಂತೆ ಸಂಪತ್ ರಾಜ್ ಕೋವಿಡ್ 19 ಪಾಸಿಟಿವ್ ಇರುವುದಾಗಿ ಹೇಳಿ ಸೆ.14ರಂದು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ