ಮಾಜಿ ಕೇಂದ್ರ ಸಚಿವ ಜಯ್ ಸಿಂಗ್ ಬಿಜೆಪಿಗೆ ರಾಜೀನಾಮೆ | ಪಕ್ಷ ಕಟ್ಟಿದವರ ನಿರ್ಲಕ್ಷ್ಯಕ್ಕೆ ಆಕ್ರೋಶ

Prasthutha|

ಔರಂಗಾಬಾದ್ : ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಜಯ್ ಸಿಂಗ್ ರಾವ್ ಗಾಯಕ್ವಾಡ್ ಪಾಟೀಲ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಜಯ್ ಸಿಂಗ್ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ.

“ನಾನು ಪಕ್ಷದಲ್ಲಿ ಸೇವೆ ಸಲ್ಲಿಸಲು ಸಿದ್ಧನಿದ್ದೇನೆ. ಆದರೆ, ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ನೀಡುತ್ತಿಲ್ಲ. ಹೀಗಾಗಿ ನಾನು ನಿರ್ಧಾರ ಕೈಗೊಂಡಿದ್ದೇನೆ’’ ಎಂದು ಜಯ್ ಸಿಂಗ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -

ರಾಜ್ಯದಲ್ಲಿ ಪಕ್ಷವನ್ನು ಕಟ್ಟಲು ಶ್ರಮಿಸಿದವರನ್ನು ಪಕ್ಷ ಬಯಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -