ಮಂಗಳೂರಿನಲ್ಲಿ ರಾತ್ರಿ ನಿರ್ಬಂಧ ಮುಂದುವರಿಕೆಗೆ ಜೆ.ಆರ್. ಲೋಬೊ ಕಿಡಿ

Prasthutha|

ಮಂಗಳೂರು: ಇತ್ತೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರ ಮತ್ತು ಅಹಿತಕರ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹೇರಿರುವ ನಿರ್ಬಂಧವನ್ನು ಮುಂದುವರಿಸಿರುವುದಕ್ಕೆ ಮಾಜಿ ಶಾಸಕ ಜೆ.ಆರ್. ಲೋಬೊ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -

ಜಿಲ್ಲೆಯ ಕೋಮು ಸೂಕ್ಷ್ಮತೆಯನ್ನು ಗಮನದಲ್ಲಿರಿಸಿ ಅಹಿತಕರ ಘಟನೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತಡ ನಡೆ ಸರಿಯಾಗಿದ್ದು, ಆದರೆ ಇದು ಒಂದೆರೆಡು ದಿನವನ್ನು ಮೀರದಂತೆ ಎಚ್ಚರಿಕೆ ವಹಿಸಬೇಕಾಗಿತ್ತು ಎಂದು ಅವರು ತಿಳಿಸಿದರು.

ಸದ್ಯ ಮಂಗಳೂರಿನಲ್ಲಿ ಉಂಟಾಗಿರುವ ಬಿಗುವಿನ ಪರಿಸ್ಥಿತಿಯನ್ನು ಹತೋಟಿಗೆ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮುಂದಾಗಬೇಕು. ಹಲವಾರು ದಿನಗಳ ಕಾಲ ಜನರ ಓಡಾಟಕ್ಕೆ ನಿರ್ಬಂಧ ಹೇರಿದರೆ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಮೊದಲೇ ಕೋವಿಡ್’ನಿಂದಾಗಿ ಜನ ತತ್ತರಿಸಿದ್ದು, ಅವರ ಆರ್ಥಿಕ ವ್ಯವಹಾರದ ಮೇಲೆ ದುಷ್ಪರಿಣಾಮ ಬಿದ್ದಿದೆ. ಸಣ್ಣಮಟ್ಟದ ವ್ಯಾಪಾರಗಳಾದ ದಿನಸಿ, ಸಲೂನ್, ಟೈಲರ್, ಕ್ಯಾಂಟೀನ್ ಮತ್ತು ದಿನಗೂಲಿ ಕಾರ್ಮಿಕರು ಸಂಕಷ್ಟವನ್ನುಭವಿಸುವಂತಾಗಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp