ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲು ಮುಂದಾದ ಮಾಜಿ ಶಾಸಕ

Prasthutha|

ಗದಗ: ಬಿಜೆಪಿ ಮಾಜಿ ಶಾಸಕ ಪಕ್ಷ ತೊರೆಯಲು ಸಿದ್ದರಾಗಿದ್ದು, ಕಾಂಗ್ರೆಸ್ ನಲ್ಲಿ ಒಂದು ಕಾಲಿಟ್ಟಿದ್ದಾರೆ.

- Advertisement -


ಶಿರಹಟ್ಟಿಯಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ರಾಮಣ್ಣ ಲಮಾಣಿ ಬಿಜೆಪಿಗೆ ಗುಡ್ ಬೈ ಹೇಳಿ ಅ.10ರಂದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.


ಈ ಬಗ್ಗೆ ಶಿರಹಟ್ಟಿ ತಾಲೂಕಿನ ಕುಂದ್ರಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದೇನೆ. ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಮತ್ತು ನಾನು ಕಾಂಗ್ರೆಸ್ಗೆ ಸೇರುತ್ತೇವೆ. ಇದೇ ವೇಳೆ ಬಿಜೆಪಿಯ ಹಲವು ಮಾಜಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

Join Whatsapp