ಮಗನಿಗೆ ಯಾರೂ ಸಾಲ ನೀಡಬೇಡಿ ಎಂದು ಬಹಿರಂಗ ಪತ್ರ ಬರೆದ ಮಾಜಿ ಶಾಸಕ

Prasthutha|

ಹುಬ್ಬಳ್ಳಿ: ಮಗನ ಸಾಲದಿಂದ ಬೇಸತ್ತು ಹೋದ ಮಾಜಿ ಶಾಸಕರೊಬ್ಬರು ದಯವಿಟ್ಟು ಇನ್ನು ಮುಂದೆ  ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ ಎಂದು ಬಹಿರಂಗ ಪತ್ರ ಬರೆದಿದ್ದಾರೆ.

- Advertisement -

ಮಾಜಿ ಶಾಸಕ ಹಾಗೂ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್​.ಪಾಟೀಲ್​ ಅವರದ್ದು ಎನ್ನಲಾದ ಬಹಿರಂಗ ಪ್ರಕಟಣೆಯೊಂದು‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಪತ್ರದಲ್ಲಿ ಮಗ ದುಶ್ಚಟಕ್ಕೆ ಬಲಿಯಾಗಿ ತನ್ನ ಎಲ್ಲ ಆಸ್ತಿಯನ್ನೂ ಹಾಳು ಮಾಡಿಕೊಂಡಿದ್ದಾನೆ. ಅವನ ಬ್ಯಾಂಕ್​ ಖಾತೆಯಲ್ಲಿ ಹಣ ಇಲ್ಲದಿದ್ದರೂ ಮುಂಗಡ ಚೆಕ್​ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದಾನೆ. ನನ್ನ ಹೆಸರನ್ನು ಹೇಳಿ ಸಾರ್ವಜನಿಕರಿಗೆ ಸುಳ್ಳು ಭರವಸೆ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದಾನೆ.ದಯವಿಟ್ಟು ಯಾರೂ ನನ್ನ ಮಗನಿಗೆ ಸಾಲ ಕೊಡಬೇಡಿ ಎಂದು‌ ಮನವಿ ಮಾಡಿದ್ದಾರೆ.

ನನ್ನ ಪುತ್ರ ಬಾಪೂಗೌಡ ಪದವೀಧರ. ಐದಾರು ವರ್ಷಗಳಿಂದ ದುಶ್ಚಟಕ್ಕೆ ಬಿದ್ದಿದ್ದಾನೆ. ಕೋಟಿಗಟ್ಟಲೇ ಸಾಲ ಮಾಡಿ, ಸಾಲ ತೀರಿಸಲು ಅವನ ಹೆಸರಿನಲ್ಲಿದ್ದ ಆಸ್ತಿಯನ್ನೂ ಮಾರಿದ್ದಾನೆ, ಅವನ ಮಾನಸಿಕ ಸ್ಥಿತಿ ಸರಿ ಇಲ್ಲ. ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಜನರಿಗೆ ಸುಳ್ಳು ಹೇಳಿ ಸಾಲ ಕೇಳುತ್ತಿದ್ದಾನೆ.

ದಯವಿಟ್ಟು ಸಾರ್ವಜನಿಕರು ನನ್ನ ಮಗನ ಮಾತಿಗೆ ಮರುಳಾಗಿ ಸಾಲ ಕೊಡಬಾರದು. ಮೋಸ ಹೋಗಬಾರದು ಎಂದು ಮಾಜಿ ಶಾಸಕರು ಮಾಧ್ಯಮಗಳಿಗೆ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ



Join Whatsapp