ಮಾಜಿ ನೌಕಾಪಡೆ ಅಧಿಕಾರಿಗಳ ಗಲ್ಲು: ಭಾರತ ಮೇಲ್ಮನವಿ ವಿಚಾರಣೆಗೆ ಕತಾರ್‌ ಕೋರ್ಟ್ ಒಪ್ಪಿಗೆ

Prasthutha|

ನವದೆಹಲಿ: ಕತಾರ್ ದೇಶದಲ್ಲಿ ಗಲ್ಲು ಶಿಕ್ಷೆಗೊಳಗಾಗಿ ಜೀವದಾಸೆ ಬಿಟ್ಟಿದ್ದ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಆಶಾಭಾವನೆ ಮೂಡಿದೆ. ಎಂಟು ಅಧಿಕಾರಿಗಳಿಗೆ ಮರಣ ದಂಡನೆ ವಿಧಿಸಿರುವುದರ ವಿರುದ್ಧ ಭಾರತ ಸಲ್ಲಿಸಿರುವ ಮೇಲ್ಮನವಿಯನ್ನು ಕತಾರ್ ಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ.

- Advertisement -

ಕತಾರ್ ನ್ಯಾಯಾಲಯವು ಶೀಘ್ರವೇ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ ಎಂದೂ ವರದಿಗಳು ಹೇಳಿವೆ. ಆದರೆ, ಈ ವಿಚಾರವಾಗಿ ವಿದೇಶಾಂಗ ಸಚಿವಾಲಯದಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಕತಾರ್‌ನ ಖಾಸಗಿ ಕಂಪನಿ ಅಲ್ ದಹ್ರಾ ಜೊತೆ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಗಳನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಬೇಹುಗಾರಿಕೆ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಕತಾರ್‌ನ ನ್ಯಾಯಾಲಯ ಅಕ್ಟೋಬರ್ 26ರಂದು ಮರಣ ದಂಡನೆ ವಿಧಿಸಿತ್ತು. ಈ ತೀರ್ಪಿಗೆ ಆಘಾತ ವ್ಯಕ್ತಪಡಿಸಿದ್ದ ಭಾರತ, 8 ಜನ ಭಾರತೀಯರನ್ನು ಶಿಕ್ಷೆಯಿಂದ ಪಾರು ಮಾಡಲು ಕಾನೂನಿನಡಿ ಲಭ್ಯವಿರುವ ಎಲ್ಲ ಆಯ್ಕೆಗಳನ್ನು ಪರಿಗಣಿಸಲಾಗುವುದು ಎಂದು ಹೇಳಿತ್ತು.

Join Whatsapp