Home ಟಾಪ್ ಸುದ್ದಿಗಳು ಪತ್ನಿಯನ್ನು ಕೊಂದು ದೇಹದ ಭಾಗಗಳನ್ನು ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಸೈನಿಕ..!

ಪತ್ನಿಯನ್ನು ಕೊಂದು ದೇಹದ ಭಾಗಗಳನ್ನು ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಸೈನಿಕ..!

ಹೈದರಾಬಾದ್: ನಿವೃತ್ತ ಸೈನಿಕನೊಬ್ಬ ತಮ್ಮ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್ ನಲ್ಲಿ ಹಾಕಿ ಬೇಯಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.


ಹೈದರಾಬಾದ್ ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ ಪೇಟ್ ನಲ್ಲಿ ಈ ಘಟನೆ ನಡೆದಿದೆ.


ನಿವೃತ್ತ ಸೈನಿಕ ಗುರುಮೂರ್ತಿ ಎಂಬಾತ ತಮ್ಮ ಪತ್ನಿ ವೆಂಕಟ ಮಾಧವಿ ಕಾಣೆಯಾಗಿದ್ದಾರೆ ಎಂದು ಜನವರಿ 18ರಂದು (ಶನಿವಾರ) ಮೀರಪೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ತನಿಖಾಧಿಕಾರಿಗಳು ಆತನನ್ನು ವಿಚಾರಣೆಗೊಳಪಡಿಸಿದಾಗ ಆಘಾತಕಾರಿ ವಿಚಾರ ಬಹಿರಂಗಗೊಂಡಿದೆ.


ಪತ್ನಿಯನ್ನು ಕೊಲೆ ಮಾಡಿ ಬಳಿಕ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ ಹಾಕಿ ಬೇಯಿಸಿದ್ದಾಗಿ ಆತ ಪೊಲೀಸರಿಗೆ ತಿಳಿಸಿದ್ದಾನೆ. ಬಳಿಕ ಬೇಯಿಸಿದ ದೇಹದ ಭಾಗಗಳನ್ನು ಜಿಲ್ಲೆಲಗುಡಾದ ಕೆರೆಗೆ ಎಸೆದಿದ್ದಾಗಿಯೂ ತಿಳಿಸಿದ್ದಾನೆ. ಆತನ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯ ಸಂಗ್ರಹಿಸಲು ಮುಂದಾಗಿದ್ದಾರೆ. ಕೆರೆಯಲ್ಲಿ ದೇಹದ ಭಾಗಗಳಿಗಾಗಿ ಹುಡುಕಾಟ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಗುರುಮೂರ್ತಿ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ನಿವೃತ್ತರಾದ ನಂತರ ಕಾಂಚನ್ ಬಾಗ್ ನಲ್ಲಿರುವ ಡಿಆರ್ ಡಿಒದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸುಮಾರು 13 ವರ್ಷಗಳ ಹಿಂದೆ ಮಾಧವಿ ಅವರನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ತನ್ನ ಹೆಂಡತಿಯನ್ನು ಕೊಂದ ನಂತರ, ಆರೋಪಿಯು ತನ್ನ ಹೆತ್ತವರೊಂದಿಗೆ ಮೀರ್ ಪೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಯಾರಿಗೂ ತನ್ನ ಮೇಲೆ ಅನುಮಾನ ಬಾರದು ಎಂದು ತಿಳಿದಿದ್ದರು. ಪ್ರಕರಣದ ತನಿಖೆ ಮುಂದುವರೆದಿದ್ದು, ಶೀಘ್ರದಲ್ಲೇ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version