►ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲಾಗದು: ದೆಹಲಿ ಹೈಕೋರ್ಟ್
ನವದೆಹಲಿ: ಐಸಿಸ್ ನಂಟು ಕೇಸ್ ನಲ್ಲಿ ಬಂಧಿತರಾಗಿದ್ದ, ಉಳ್ಳಾಲದ ಮಾಜಿ ಶಾಸಕ ದಿ.ಇದಿನಬ್ಬರವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ. ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿರುವುದು ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ ಎಂದು ದೆಹಲಿ ಹೈಕೋರ್ಟ್ ತೀರ್ಪು ವೇಳೆ ಹೇಳಿದೆ.
ಆಗಸ್ಟ್ 21, 2021ರಂದು ಐಸಿಸ್ ನಂಟಿನ ಆರೋಪದಡಿ ಅಮ್ಮರ್ ಅಬ್ದುಲ್ ರೆಹಮಾನ್ ಬಂಧನವಾಗಿತ್ತು. ಯುಎಪಿಎ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ದಳ ಬಂಧಿಸಿದ್ದರು. ಆದರೆ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್ ನಲ್ಲಿ ಜಾಮೀನಿಗೆ ರೆಹಮಾನ್ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನಿರಾಕರಿಸಿದ ಹಿನ್ನೆಲೆ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ದೆಹಲಿ ಹೈ ಕೋರ್ಟ್, ಆರೋಪಿಯನ್ನು ಉಗ್ರ ಎನ್ನಲು ಯಾವುದೇ ಸಾಕ್ಷ್ಯ ಇಲ್ಲ ಎಂದು ಹೇಳಿ ಜಾಮೀನು ನೀಡಿದೆ.
ಅಮ್ಮರ್ ಅಬ್ದುಲ್ ರೆಹಮಾನ್ ಜೊತೆಗೆ ದಿ.ಇದಿನಬ್ಬ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂರನ್ನು ಕೂಡ ಬಂಧಿಸಲಾಗಿತ್ತು.