ವಾರಾಂತ್ಯ ಕರ್ಫ್ಯೂ ಹಿನ್ನೆಲೆ| ಪರೀಕ್ಷೆಗಳ ಮುಂದೂಡಿಕೆ

Prasthutha|

ಮಂಗಳೂರು: ಗಡಿ ಜಿಲ್ಲೆಗಳಲ್ಲಿ ಕೋವಿಡ್‌ ಸೋಂಕು ಅಧಿಕವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಾರಾಂತ್ಯ ಕರ್ಫ್ಯೂ ಜಾರಿಗೆ ತಂದಿರುವುದರಿಂದ ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್‌  14 ಮತ್ತು ಆಗಸ್ಟ್‌ 28  ರ ಶನಿವಾರಗಳಂದು ಮಂಗಳೂರು ವಿಶ್ವವಿದ್ಯಾನಿಲಯವು ನಿಗದಿಪಡಿಸಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ.

- Advertisement -

ಈ ಕುರಿತು ಮಾಹಿತಿ ನೀಡಿದ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ ಎಲ್‌ ಧರ್ಮ, ಪರೀಕ್ಷೆಗಳ ದಿನಾಂಕಗಳನ್ನು ಮರುನಿಗದಿಪಡಿಸಿ, ಪರೀಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಇ-ಮೇಲ್‌ ಮೂಲಕ ಕಳುಹಿಸಿಕೊಡಲಾಗುವುದು ಮತ್ತು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ (www.mangaloreuniversity.co.in) ದಲ್ಲಿ ಇಂದು (ಗುರುವಾರ) ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.



Join Whatsapp