ಅಬಕಾರಿ ನೀತಿ ಹಗರಣ: ಆಪ್ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇಡಿ ದಾಳಿ

Prasthutha|

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆಪ್ ಸಂಸದ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಠಕಾರಿಗಳು ದಾಳಿ ನಡೆಸಿದ್ದಾರೆ.

- Advertisement -


ಇಂದು (ಬುಧವಾರ) ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಶೋಧ ನಡೆಸಿದರು.


ದಾಳಿ ಬಗ್ಗೆ ಮಾತನಾಡಿರುವ ಆಪ್ ವಕ್ತಾರೆ ರೀನಾ ಗುಪ್ತಾ, ಸಂಜಯ್ ಸಿಂಗ್ ಅವರು ಪ್ರಧಾನಿ ಮೋದಿ ಮತ್ತು ಅದಾನಿ ವಿಷಯದ ಬಗ್ಗೆ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದ್ದರಿಂದ ಅವರ ನಿವಾಸದ ಮೇಲೆ ದಾಳಿ ನಡೆಸಲಾಗುತ್ತಿದೆ. ಹಿಂದೆಯೂ ಏನೂ ಸಿಗಲಿಲ್ಲ, ಇಂದು ಏನೂ ಸಿಗುವುದಿಲ್ಲ ಎಂದು ಹೇಳಿದ್ದಾರೆ.

Join Whatsapp