ನವದೆಹಲಿ: ರದ್ದಾದ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಕುರಿತ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ದೆಹಲಿಯ 25 ಕಡೆಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮದ್ಯ ಮಾರಾಟಗಾರರು ಮತ್ತು ವಿತರಕರಿಗೆ ಸಂಬಂಧಿಸಿದ ಖಾಸಗಿ ಸಂಸ್ಥೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ತನಿಖಾ ಏಜೆನ್ಸಿ ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಅನೇಕ ದಾಳಿಗಳನ್ನು ನಡೆಸಿದ್ದು, ಉದ್ಯಮಿ ಮತ್ತು ಮದ್ಯ ತಯಾರಿಕಾ ಕಂಪೆನಿ ಇಂಡೋಸ್ಪಿರಿಟ್ ನ ವ್ಯವಸ್ಥಾಪಕ ನಿರ್ದೇಶಕ ಸಮೀರ್ ಮಹಂದ್ರು ಅವರನ್ನು ಬಂಧಿಸಿತ್ತು.