Home ಟಾಪ್ ಸುದ್ದಿಗಳು ಅಬಕಾರಿ ಹಗರಣ: ಕೇಜ್ರಿವಾಲ್‌ ರನ್ನು ವಿಚಾರಣೆಗೊಳಪಡಿಸಲು EDಗೆ ಕೇಂದ್ರ ಒಪ್ಪಿಗೆ

ಅಬಕಾರಿ ಹಗರಣ: ಕೇಜ್ರಿವಾಲ್‌ ರನ್ನು ವಿಚಾರಣೆಗೊಳಪಡಿಸಲು EDಗೆ ಕೇಂದ್ರ ಒಪ್ಪಿಗೆ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರಿಗೆ ಸಂಕಷ್ಟ ಎದುರಾಗಿದೆ.

ದೆಹಲಿಯ ಅಬಕಾರಿ ನೀತಿ ಹಗರಣದೊಂದಿಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಕೇಂದ್ರ ಗೃಹ ಸಚಿವಾಲಯವು ಅನುಮತಿ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈಚೆಗೆ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೇರಿದಂತೆ 40 ಆರೋಪಿಗಳಿಗೆ ದೆಹಲಿ ಹೈಕೋರ್ಟ್‌ ಸೂಚನೆ ನೀಡಿತ್ತು.

ಮನೀಷ್‌ ಸಿಸೋಡಿಯಾ, ಸಂಜಯ್‌ ಸಿಂಗ್‌ ಮತ್ತು ಇತರ ಎಎಪಿ ನಾಯಕರು, ಬಿಆರ್‌ಎಸ್ ನಾಯಕಿ ಕೆ. ಕವಿತಾ ಹಾಗೂ ಪ್ರಕರಣದ ಆರೋಪಿಗಳಾದ ಹಲವು ಉದ್ಯಮಿಗಳಿಗೆ ನೋಟಿಸ್ ಜಾರಿ ಮಾಡಿತ್ತು.

Join Whatsapp
Exit mobile version