ಬೀದಿ ನಾಯಿಗಳ ದಾಳಿಗೆ ಸಿಲುಕಿ ‘ವಾಘ್ ಬಕ್ರಿ ಟೀ’ ಗ್ರೂಪ್‌ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮೃತ್ಯು

Prasthutha|

ಮುಂಬೈ:ವಾಘ್ ಬಕ್ರಿ ಟೀ ಗ್ರೂಪ್‌ನ ಎಕ್ಸಿಕ್ಯೂಟಿವ್ ಡೈರೆಕ್ಟರ್, ದೊಡ್ಡ ಶ್ರೀಮಂತ ಪರಾಗ್ ದೇಸಾಯಿ ತಮ್ಮ ನಿವಾಸದ ಹೊರಗೆ ಬೀದಿ ನಾಯಿಗಳ ದಾಳಿಗೆ ಸಿಲುಕಿ ದಾರುಣವಾಗಿ ಮೃತರಾಗಿದ್ದಾರೆ.
ಅವರಿಗೆ 49 ವರ್ಷವಯಸ್ಸಾಗಿತ್ತು. ನಾಯಿಗಳ ದಾಳಿಯಿಂದಾಗಿ ತೀವ್ರ ಗಾಯಗೊಂಡ ಅವರನ್ನು ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ದೇಸಾಯಿ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಝೈಡಸ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅಲ್ಲಿಂದ ಮತ್ತೆ ಝೈಡಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಿದುಳಿನ ರಕ್ತಸ್ರಾವಕ್ಕೆ ಒಳಗಾಗಿ ದೇಸಾಯಿ ಮೃತಪಟ್ಟಿದ್ದಾರೆ.

- Advertisement -

ಪರಾಗ್ 1892 ರಲ್ಲಿ ನಾರಂದಾಸ್ ದೇಸಾಯಿ ಸ್ಥಾಪಿಸಿದ ಕಂಪನಿಯ ವ್ಯವಹಾರಗಳನ್ನು ನಿರ್ವಹಿಸುವ ದೇಸಾಯಿ ಕುಟುಂಬದ ನಾಲ್ಕನೇ ತಲೆಮಾರಿನ ಸದಸ್ಯರು.

ಪರಾಗ್ ಮತ್ತು ತಮ್ಮ ಸೋದರ ಸಂಬಂಧಿ ಪರಾಸ್ 1990ರ ದಶಕದಲ್ಲಿ ಕುಟುಂಬದ ವ್ಯವಹಾರಕ್ಕೆ ಸೇರಿದ್ದರು. ಅಮೆರಿಕದ ಲಾಂಗ್ ಐಲ್ಯಾಂಡ್ ವಿಶ್ವವಿದ್ಯಾನಿಲಯದಿಂದ ಎಂಬಿಎ ಪದವಿ ಪಡೆದಿರುವ ಪರಾಗ್, ವಾಘ್ ಬಕ್ರಿ ಟೀ ಗ್ರೂಪ್‌ನ ಇಬ್ಬರು ಕಾರ್ಯನಿರ್ವಾಹಕ ನಿರ್ದೇಶಕರಲ್ಲಿ ಒಬ್ಬರು. ಕಂಪನಿಯ ಮಾರಾಟ, ಮಾರುಕಟ್ಟೆ ಮತ್ತು ರಫ್ತುಗಳನ್ನು ಮುನ್ನಡೆಸುತ್ತಿದ್ದರು ಮತ್ತು ಪರಿಣಿತ ಚಹಾ ರುಚಿಕಾರ ಮತ್ತು ಮೌಲ್ಯಮಾಪಕರಾಗಿದ್ದರು.

- Advertisement -

ದೇಸಾಯಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.