ಶಿಂಧೆ ನೇತೃತ್ವದ ಶಿವಸೇನೆ ಸೇರಿದ ಉಚ್ಚಾಟಿತ ಕಾಂಗ್ರೆಸ್ ನಾಯಕ

Prasthutha|

ಮುಂಬೈ: ಸುಮಾರು ಎರಡು ದಶಕಗಳ ಹಿಂದೆ ಅವಿಭಜಿತ ಶಿವಸೇನೆ ತೊರೆದು ಕಾಂಗ್ರೆಸ್ ಸೇರಿದ್ದ ಮುಂಬೈ ಮಾಜಿ ಸಂಸದ ಸಂಜಯ್ ನಿರುಪಮ್ ಅವರು ಇಂದು ಸಿಎಂ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಸೇರ್ಪಡೆಯಾಗಿದ್ದಾರೆ.

- Advertisement -

ಕಳೆದ ತಿಂಗಳು ಸಂಜಯ್ ನಿರುಪಮ್ ಅಶಿಸ್ತು ಮತ್ತು ಪಕ್ಷ ವಿರೋಧಿ ಚಟುವಟಿಕೆಯ ಆರೋಪದಲ್ಲಿ ಆರು ವರ್ಷಗಳ ಕಾಲ ಕಾಂಗ್ರೆಸ್‌ನಿಂದ ಉಚ್ಚಾಟನೆಗೊಂಡಿದ್ದರು. ಇಂತು ಕುಟುಂಬ ಸಮೇತ ಶಿಂಧೆ ಶಿವಸೇನೆ ಸೇರಿದರು.

ಸಂಜಯ್ ನಿರುಪಮ್ 2005 ರಲ್ಲಿ ಶಿವಸೇನೆ ಕಾಂಗ್ರೆಸ್ ಸೇರಿದ್ದರು. ಬಳಿಕ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2009ರ ಚುನಾವಣೆಯಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಿರಿಯ ನಾಯಕ ರಾಮ್ ನಾಯಕ್ ವಿರುದ್ಧ ಗೆಲುವು ಸಾಧಿಸಿದ್ದರು.

Join Whatsapp