ನವದೆಹಲಿ: ಪೆಗಾಸಸ್ ಕಣ್ಗಾವಲು ಪ್ರಕರಣದ ತನಿಖೆಗಾಗಿ ತಜ್ಞರ ಸಮಿತಿ ರಚಿಸುವುದಾಗಿ ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಳ್ಳಿಹಾಕಿದೆ.
ಪೆಗಾಸಸ್ ಬೇಹುಗಾರಿಕಾ ಹಗರಣದ ಸ್ವತಂತ್ರ ತನಿಖೆ ಕೋರಿ ಭಾರತೀಯ ಸಂಪಾದಕರ ಒಕ್ಕೂಟ, ವಿವಿಧ ಪತ್ರಕರ್ತರು ಹಾಗೂ ಮತ್ತಿತರರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಸಿಜೆಐ ಎನ್ ವಿ ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ವಿಭಾಗೀಯ ಪೀಠ ಕೈಗೆತ್ತಿಕೊಂಡಿದೆ.