ನವದೆಹಲಿ: ದೆಹಲಿಯ ಗಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಐಇಡಿ- ಸುಧಾರಿತ ಸ್ಫೋಟಕ ಸಾಧನ ಪತ್ತೆಯಾಗಿದೆ. ಅದನ್ನು ನಿಷ್ಕ್ರಿಯಗೊಳಿಸುವ ಕೆಲಸ ನಡೆದಿದೆ. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಪೂರ್ವ ದೆಹಲಿಯ ಗಾಜಿಪುರ ಮಾರುಕಟ್ಟೆಯಲ್ಲಿ ಅನುಮಾನಾಸ್ಪದ ಪೆಟ್ಟಿಗೆ ಕಂಡು ಬಂದಿದ್ದು, ಇದರ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷ ಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ.
NSGಯ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.