ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಪತ್ತೆ: ನಟಿ ರನ್ಯಾ ರಾವ್​ಗೆ ಸೇರಿದ ಕೋಟ್ಯಾಂತರ ರೂ. ಆಸ್ತಿ ಜಪ್ತಿ

- Advertisement -

ಬೆಂಗಳೂರು: ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

- Advertisement -

ರನ್ಯಾ ರಾವ್​ಗೆ ಸೇರಿದ ಬೆಂಗಳೂರಿನ ಅರ್ಕಾವತಿ ಬಡವಾಣೆಯಲ್ಲಿನ ನಿವೇಶ, ವಿಕ್ಟೋರಿಯಾ ಲೇಔಟ್​ನಲ್ಲಿನ ಮನೆ, ಅನೇಕಲ್​ನಲ್ಲಿನ ಕೃಷಿ ಜಮೀನು ಮತ್ತು ತುಮಕೂರಿನಲ್ಲಿನ ಜಮೀನನ್ನು ಇಡಿ ಜಪ್ತಿ ಮಾಡಿದೆ. ಚಿನ್ನ ಕಳ್ಳಸಾಗಾಣಿಕೆ ಸಂಬಂಧಿಸಿದಂತೆ ದಾಖಲಾಗಿರುವ ಸಿಬಿಐ ಮತ್ತು ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್​ಐ) ಒಪ್ಪಿಗೆ ಮೇರೆಗೆ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿಕೊಂಡಿದೆ.

ರಾನ್ಯ ರಾವ್​ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾರ್ಚ್​ನಲ್ಲಿ ದುಬೈನಿಂದ ಹಿಂದಿರುಗುವಾಗ ಬಂಧಿಸಲಾಗಿತ್ತು. ಕಸ್ಟಮ್​ ಅಧಿಕಾರಿಗಳು ಇವರನ್ನು ತಪಾಸಣೆಗೆ ಒಳಪಡಿಸಿದಾಗ ​ 12.56 ಕೋಟಿ ರೂ. ಮೌಲ್ಯದ 14.213 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ರನ್ಯಾ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದಾಗ 2.67 ಕೋಟಿ ಮೌಲ್ಯದ ದಾಖಲೆಗಳಿಲ್ಲದ ಹಣ ಮತ್ತು 2.06 ಕೋಟಿ ಮೌಲ್ಯದ ಚಿನ್ನದ ಆಭರಣಗಳು ಪತ್ತೆಯಾದ್ದವು.

- Advertisement -


Must Read

Related Articles