ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Prasthutha|

ಅಮರಾವತಿ: ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ. ನ್ಯಾಯಾಲಯ ನವೆಂಬರ್ 1ರವರೆಗೆ ವಿಸ್ತರಿಸಿ ಆದೇಶಿಸಿದೆ.

- Advertisement -

ಇಂದಿಗೆ (ಅಕ್ಟೋಬರ್ 19) ಅವರ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡಿತ್ತು. ಆದರೆ ಸ್ಥಳೀಯ ಎಸಿಬಿ ನ್ಯಾಯಾಲಯದ ಹೊಸ ಆದೇಶದಂತೆ ಬಂಧನದ ಅವಧಿ ಮುಂದುವರೆದಿದೆ.

ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ಕಾರಣ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ವಿಜಯವಾಡ ಎಸಿಬಿ ನ್ಯಾಯಾಲಯವು ನ್ಯಾಯಾಂಗ ಬಂಧನದ ಅವಧಿಯನ್ನು ನವೆಂಬರ್​ 1ರವರೆಗೆ ವಿಸ್ತರಿಸಿ ಆದೇಶಿಸಿದೆ.

- Advertisement -

ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶ ಸಿಐಡಿ ಸೆಪ್ಟೆಂಬರ್​ 9ರಂದು ವಶಕ್ಕೆ ಪಡೆದಿತ್ತು.