ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ಮಧು ಜಿ ಮಾದೇಗೌಡ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದರು.
ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17, 2024ಕಕ್ಕೆ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ರಾಜ್ಯದಲ್ಲಿ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ಆದಷ್ಟು ಬೇಗ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ವಿವರಿಸಿದರು.