Home ಟಾಪ್ ಸುದ್ದಿಗಳು ಹೆಚ್‌ಎಸ್‌ಆರ್‌ಪಿ ಅಳವಡಿಸಲು ಸೆಪ್ಟಂಬರ್‌ 15ರ ವರೆಗೆ ಅವಧಿ ವಿಸ್ತರಣೆ

ಹೆಚ್‌ಎಸ್‌ಆರ್‌ಪಿ ಅಳವಡಿಸಲು ಸೆಪ್ಟಂಬರ್‌ 15ರ ವರೆಗೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫ‌ಲಕ (ಹೆಚ್‌ಎಸ್‌ಆರ್‌ಪಿ) ಅಳವಡಿಸಲು ಸೆಪ್ಟಂಬರ್‌ 15ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ವೇಳೆ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ ನ್ಯಾಯಪೀಠದ ಮುಂದೆ, ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆ. 15ರ ವರೆಗೆ ರಾಜ್ಯ ಸರಕಾರ ವಿಸ್ತರಿಸಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

1.4 ಕೋಟಿ ವಾಹನ ನೋಂದಣಿಗೆ ಬಾಕಿ!

ರಾಜ್ಯದಲ್ಲಿ ಇಲ್ಲಿವರೆಗೆ 43 ಲಕ್ಷ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಸಲಾಗಿದ್ದು, ಇನ್ನೂ 1.3ರಿಂದ 1.4 ಕೋಟಿ ವಾಹನಗಳು ಬಾಕಿ ಇವೆ ಎಂದು ಹೇಳಲಾಗಿದೆ.

Join Whatsapp
Exit mobile version