ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಗುಜರಾತ್ ನ ಗಾಂಧಿನಗರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಗುಜರಾತ್ ನ ಇತರೆ ಇಬ್ಬರು ರಾಜ್ಯಸಭಾ ಸದಸ್ಯರೊಂದಿಗೆ ಆಗಸ್ಟ್ 18ರಂದು ಎಸ್. ಜೈಶಂಕರ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ ಅವರು ನಾಮಪತ್ರ ಸಲ್ಲಿಸಿದ್ದಾರೆ. ಉಳಿದ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಸಂಸದೀಯ ಮಂಡಳಿ ಇನ್ನೂ ಅಂತಿಮಗೊಳಿಸಿಲ್ಲ.