ಸುಲಿಗೆ ಆರೋಪ: IPS ಅಧಿಕಾರಿ ರವಿ ಚನ್ನಣ್ಣನವರ್‌ ಅಮಾನತಿಗೆ AAP ಆಗ್ರಹ

Prasthutha|

ಬೆಂಗಳೂರು: ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಎಎಪಿ, ರವಿ ಚನ್ನಣ್ಣನವರ್‌ ಅಮಾನತಿಗೆ ಆಗ್ರಹಿಸಿದೆ.

- Advertisement -

ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್‌ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದ್ದಾರೆ.

“ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ ಚನ್ನಣ್ಣನವರ್‌ ಹಾಗೂ ಇತರೆ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ, ಪೊಲೀಸ್‌ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ ಚನ್ನಣ್ಣನವರ್‌ರವರು ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ

Join Whatsapp