ಐಟಿ ನಿಯಮ ಪ್ರಶ್ನಿಸಿ ಫೇಸ್ ಬುಕ್, ವಾಟ್ಸಾಪ್ ಅರ್ಜಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

Prasthutha|

ನವದೆಹಲಿ:  ಕೇಂದ್ರ ಸರ್ಕಾರ ತಂದಿರುವ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

- Advertisement -

ಸರ್ಕಾರದ ಹೊಸ ನಿಯಮ ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತಿದ್ದು ಅಸಂವಿಧಾನಿಕವಾಗಿದೆ ಎಂದು ಸೋಷಿಯಲ್ ಮೀಡಿಯಾ ಸಂಸ್ಥೆಗಳು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವು, ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ನೊಟೀಸ್ ಜಾರಿ ಮಾಡಿದ್ದು ಪ್ರತಿಕ್ರಿಯೆ ನೀಡುವಂತೆ ಮತ್ತು ನೂತನ ಐಟಿ ನಿಯಮದ ಜಾರಿಗೆ ತಡೆಯೊಡ್ಡುವಂತೆ ಸೂಚಿಸಿದೆ.

Join Whatsapp