ತನ್ನ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಪತ್ರಕರ್ತ ಝುಬೈರ್ ಅರ್ಜಿ

Prasthutha|

ಲಕ್ನೋ: ತನ್ನ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ 6 ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಖ್ಯಾತ ಪತ್ರಕರ್ತ ಮುಹಮ್ಮದ್ ಝುಬೈರ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಪ್ರಕರಣಗಳ ತನಿಖೆಗಾಗಿ ರಚಿಸಿರುವ ವಿಶೇಷ ತನಿಖಾ ತಂಡವನ್ನೂ ರದ್ದುಗೊಳಿಸುವಂತೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

- Advertisement -

ತನಗೆ ಜೀವ ಬೆದರಿಕೆ ಇದೆ ಎಂದು ಮುಹಮ್ಮದ್ ಝುಬೈರ್ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದು, ಸೀತಾಪುರದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

ಇದರ ಹೊರತಾಗಿಯೂ ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಅವರ ವಿರುದ್ಧ ದಾಖಲಾಗಿರುವ ಇತರ ಪ್ರಕರಣಗಳಿಗೆ ಈ ವಿಸ್ತರಣೆ ಅನ್ವಯವಾಗದ ಹಿನ್ನೆಲೆಯಲ್ಲಿ ಅವರು ಇನ್ನೂ ಜೈಲಿನಲ್ಲಿದ್ದಾರೆ. ಅಲ್ಲದೆ ಅದೇ ದಿನ ಉತ್ತರ ಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಅವರ ವಿರುದ್ಧ ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣಗಳನ್ನು ಶೀಘ್ರ ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸುವಂತೆ ಎಸ್.ಐ.ಟಿಗೆ ಸೂಚಿಸಲಾಗಿದೆ.

Join Whatsapp