ಮುಂಬೈ: ಕಳೆದ ರಾತ್ರಿ ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಉದ್ದವ್ ಠಾಕ್ರೆ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಮಧ್ಯಾಹ್ನದ ಬಳಿಕ ರಾಜಭವನದಲ್ಲಿ ಮಹಾರಾಷ್ಟ್ರ ರಾಜ್ಯಪಾಲರ ಕೋಶ್ಯಾರಿ ಅವರನ್ನು ಭೇಟಿಯಾದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಫಡ್ನವೀಸ್ ಮತ್ತು ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಅದರ ಬೆನ್ನಲ್ಲೇ ರಾಜಭವನದಲ್ಲಿ ನೂತನ ಸರಕಾರದ ಪದಗ್ರಹನ ಕಾರ್ಯಕ್ರಮ ಸಂಜೆ 7ಕ್ಕೆ ನಡೆಯಲಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿಯಾಗಿ ದೇವೆಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಲಿದ್ದು, ಉಪಮುಖ್ಯಮಂತ್ರಿಯಾಗಿ ಏಕನಾಥ ಶಿಂಧೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.