ಇಂದಿನಿಂದ ನ್ಯಾಯಬೆಲೆ ಅಂಗಡಿ ಬಂದ್ !

Prasthutha|

ಬೆಂಗಳೂರು: 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ಹಣವನ್ನು ಖಾತೆಗೆ ಹಾಕುವ ರಾಜ್ಯ ಸರ್ಕಾರ ನಿರ್ಧಾರದಿಂದ ಬೇಸತ್ತಿರುವ ನ್ಯಾಯಬೆಲೆ ವರ್ತಕರು ನಮಗೆ ಇದರಿಂದ ನಷ್ಟ ಆಗೋದು ಪಕ್ಕ, ನಾವೂ 10 ಕೆಜಿ ಅಕ್ಕಿ ನೀಡಿದ್ರೇ ನಮಗೆ ಕಮಿಷನ್ ಹೆಚ್ಚಾಗಿ ಸಿಗುತ್ತೆ ಅಂತಾ ವೋಟ್ ಹಾಕಿದ್ವಿ. ಈಗ 5 ಕೆಜಿ ಅಕ್ಕಿ ನೀಡಿದ್ರೇ ಕಮಿಷನ್ ಕಟ್ ಆಗುತ್ತೆ. ಇದನ್ನೇ ನಂಬಿಕೊಂಡಿರೋ ನಾವೂ ಹೇಗೆ ಜೀವನ ಮಾಡೋದು ಎಂದು ಆತಂಕಗೊಂಡಿದ್ದಾರೆ.

- Advertisement -


ಇದೇ ಕಾರಣದಿಂದ ರಾಜ್ಯದ ಒಟ್ಟು 20 ಸಾವಿರಕ್ಕೂ ಅಧಿಕ ಪಡಿತರ ವಿತರಕರು ಇಂದಿನಿಂದ ನ್ಯಾಯಬೆಲೆ ಅಂಗಡಿಯನ್ನ ಬಂದ್ ಮಾಡಿ ರೇಷನ್ ವಿಲೇವಾರಿ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮನ್ನು ಕರೆದು ಚರ್ಚೆ ಮಾಡಬೇಕು, ಖಾತೆಗೆ ಹಣ ಹಾಕೋ ಬದಲು 10 ಕೆ.ಜಿಗೆ ಬೇರೆ ದವಸಗಳನ್ನ ನೀಡಿ, ಇಲ್ಲವೇ ಖಾತೆಗೆ ಹಣ ಹಾಕ್ತೀರಾ ನಮಗೆ 10 ಕೆ.ಜಿಯ ಕಮಿಷನ್ ನೀಡಿ ಅನ್ನೋ ಪಟ್ಟು ಹಿಡಿದಿದ್ದಾರೆ.



Join Whatsapp