ಬೆಂಗಳೂರಿನ ಶಾಲೆಗಳಿಗೆ ಬಂದಿದ್ದು ಹುಸಿ ಬಾಂಬ್ ಬೆದರಿಕೆ: ಕಮಲ್ ಪಂತ್

Prasthutha|

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಏಕಕಾಲದಲ್ಲಿ ಇ-ಮೇಲ್ ಮುಖಾಂತರ ಬಂದ ಬಾಂಬ್ ಬೆದರಿಕೆ ಕರೆ ಕೇವಲ ಹುಸಿ ಬಾಂಬ್ ಕರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

- Advertisement -

ಈ ಮಾಹಿತಿ ಬೆನ್ನಲ್ಲೇ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಇಂಚಿಂಚೂ ಸ್ಥಳ ಪರಿಶೀಲಿಸಿದೆ. ಎಲ್ಲಿಯೂ ಕೂಡ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಕರೆ ಎಂದು ದೃಢಪಟ್ಟಿದೆ.

ಈ ಬಗ್ಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಎಸ್ಎಸ್ಎಲ್ಸಿ ಪರೀಕ್ಷೆ ಸಮಯದಲ್ಲಿ ಇಂತಹ ಬಾಂಬ್ ಕರೆ ಸಂದೇಶ ಬರುವುದು ಸಹಜ. ತಪಾಸಣೆ ನಡೆಸಿದಾಗ ಹುಸಿ ಬಾಂಬ್ ಕರೆ ಎಂದು ಸಾಬೀತಾಗಿದೆ. ಬೇರೆ ಬೇರೆ ಇ-ಮೇಲ್ ಐಡಿ ಮೂಲಕ ಆರೋಪಿ ಮೇಲ್ ಕಳಿಸಿದ್ದಾನೆ. ಸದ್ಯ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು. ಬಾಂಬ್ ಬೆದರಿಕೆ ಬಗ್ಗೆ ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Join Whatsapp