Home ಟಾಪ್ ಸುದ್ದಿಗಳು ಮಂಗಳೂರು ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ

ಮಂಗಳೂರು ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ

ಮಂಗಳೂರು: ಸೈಬರ್​ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ​ಹೆಸರಿನಲ್ಲಿ ನಕಲಿ ಫೇಸ್​​​ಬುಕ್ ಖಾತೆ ತೆರೆದಿದ್ದಾರೆ.

ಸೈಬರ್​ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ​​​​ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್​ ರಿಕ್ವೆಸ್ಟ್ ಕಳುಹಿಸುತ್ತಿದ್ದರು. ಬಳಿಕ, ಮೆಸೆಂಜರ್​ ಮುಖಾಂತ ಸಂದೇಶ ಕಳುಹಿಸಿ​ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು.

ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ​​​​ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್​ ​ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ “ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ” ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Join Whatsapp
Exit mobile version