ಬೆಂಗಳೂರು: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಫೋಟೋ, ಹೆಸರು ಬಳಸಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ. ಸದ್ಯ ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ದಾಖಲಿಸಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ರೀತಿ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ಸಲ್ಲಿಸಿದ್ದಾರೆ.
ಅಪರಿಚಿತ ವ್ಯಕ್ತಿ ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಹೆಸರು ಮತ್ತು ಫೋಟೋವನ್ನು ಬಳಸಿಕೊಂಡು ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ರೀತಿ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ಸಲ್ಲಿಸಿದ್ದಾರೆ.
ಇನ್ನು ದೂರು ದಾಖಲಾಗುತ್ತಿದ್ದಂತೆ ಸೈಬರ್ ಪೊಲೀಸರು ಖಾತೆಯನ್ನು ಕ್ಲೋಸ್ ಮಾಡಿಸಿದ್ದು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ಗವರ್ನರ್ ಹೆಸರಿನಲ್ಲಿ ನಕಲಿ ಖಾತೆ ತೆರೆಯುವ ಉದ್ದೇಶವೇನು? ಈ ನಕಲಿ ಖಾತೆಯಿಂದ ಯಾರಿಗಾದರೂ ಸಮಸ್ಯೆಯಾಗಿದೆಯಾ? ಎಂಬ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.