ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ : ಎಫ್​ಐಆರ್ ದಾಖಲು

Prasthutha|

ಬೆಂಗಳೂರು: ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರ ಫೋಟೋ, ಹೆಸರು ಬಳಸಿ ನಕಲಿ ಫೇಸ್​ಬುಕ್ ಖಾತೆ ತೆರೆದಿದ್ದಾರೆ. ಸದ್ಯ ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ದಾಖಲಿಸಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ರೀತಿ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ಸಲ್ಲಿಸಿದ್ದಾರೆ.

- Advertisement -

ಅಪರಿಚಿತ ವ್ಯಕ್ತಿ ಕರ್ನಾಟಕದ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರ ಹೆಸರು ಮತ್ತು ಫೋಟೋವನ್ನು ಬಳಸಿಕೊಂಡು ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ರೀತಿ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ಸಲ್ಲಿಸಿದ್ದಾರೆ.

ಇನ್ನು ದೂರು ದಾಖಲಾಗುತ್ತಿದ್ದಂತೆ ಸೈಬರ್ ಪೊಲೀಸರು ಖಾತೆಯನ್ನು ಕ್ಲೋಸ್ ಮಾಡಿಸಿದ್ದು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ಗವರ್ನರ್ ಹೆಸರಿನಲ್ಲಿ ನಕಲಿ ಖಾತೆ ತೆರೆಯುವ ಉದ್ದೇಶವೇನು? ಈ ನಕಲಿ ಖಾತೆಯಿಂದ ಯಾರಿಗಾದರೂ ಸಮಸ್ಯೆಯಾಗಿದೆಯಾ? ಎಂಬ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.

Join Whatsapp