ಬೆಂಗಳೂರು: ‘ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಪತ್ರ ಬರೆದಿರುವವರ ವಿರುದ್ಧ ಶೀಘ್ರ ಕ್ರಮವಾಗಲಿದೆ ಕಾಂಗ್ರೆಸ್ ಎಚ್ಚರಿಕೆ ನೀಡಿದೆ.
ಭ್ರಷ್ಟಾಚಾರ ಆರೋಪ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ.ಆರ್. ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ’ ಎಂದು ಟೀಕಿಸಿದೆ.
‘ಪತ್ರದಲ್ಲಿ ಹೆಸರಿಸಿರುವ ಅಧಿಕಾರಿಗಳು ಯಾರೂ ಮಂಡ್ಯದಲ್ಲಿಲ್ಲ, ಈ ಪತ್ರದ ಕುರಿತು ಮಾಹಿತಿಯೂ ಮಂಡ್ಯದ ಅಧಿಕಾರಿಗಳಿಗಿಲ್ಲ ಎಂದು ಖಚಿತಪಡಿಸಿದ್ದಾರೆ, ಈ ನಕಲಿ ಪತ್ರಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿದೆ. ಇದರ ಹಿಂದಿರುವುದು ಬಿಜೆಪಿ ಫೇಕ್ ಫ್ಯಾಕ್ಟರಿಯೋ ಅಥವಾ ಪೆನ್ ಡ್ರೈವ್ ಶೂರರೋ ಎಂಬುದನ್ನು ಬಯಲಿಗಿಡುತ್ತೇವೆ’ ಎಂದು ಕಾಂಗ್ರೆಸ್ ಗುಡುಗಿದೆ.
ನಕಲಿ ಪೆನ್ ಡ್ರೈವ್ ಆಯ್ತು,
— Karnataka Congress (@INCKarnataka) August 8, 2023
ಶಾಸಕ ಬಿ ಆರ್ ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು,
ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು!
ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ.
ಪತ್ರದಲ್ಲಿ ಹೆಸರಿಸಿರುವ ಅಧಿಕಾರಿಗಳು ಯಾರೂ ಮಂಡ್ಯದಲ್ಲಿಲ್ಲ, ಈ ಪತ್ರದ ಕುರಿತು ಮಾಹಿತಿಯೂ ಮಂಡ್ಯದ… pic.twitter.com/8UyMvHn3Hi